ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅವರಿಗೆ 2026ನೇ ಸಾಲಿನ 'ಕೃಷ್ಟೋತ್ಸವ ಪ್ರಶಸ್ತಿ'
ಜವನೆರ್ ಬೆದ್ರ ಫೌಂಡೇಶನ್ ವತಿಯಿಂದ ಗೋಪಾಲಕೃಷ್ಣ ದೇವಸ್ಥಾನದ 110ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಂಗವಾಗಿ ಆಯೋಜಿಸಲಾದ 'ಬೆದ್ರದ ಕೃಷ್ಟೋತ್ಸವ-2026' ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅವರಿಗೆ 2026ನೇ ಸಾಲಿನ 'ಕೃಷ್ಟೋತ್ಸವ ಪ್ರಶಸ್ತಿ' ಪ್ರದಾನ ಮಾಡಲಾಯಿತು. ಕೆ. ಅಮರನಾಥ ಶೆಟ್ಟಿ ವೃತ್ತದ ಬಳಿಯ ವೇಣೂರು ಕೃಷ್ಣಯ್ಯ ವೇದಿಕೆಯಲ್ಲಿ ಬೆದ್ರದ ಕೃಷೋತ್ಸವ-2026 ಕಾರ್ಯಕ್ರಮ ನಡೆಯಿತು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.